ಬಿಜೆಪಿ ಪಕ್ಷದಿಂದ ದೀಪಕ್ ಕುಮಾರ್ ಶೆಟ್ಟಿ ಉಚ್ಚಾಟನೆ

ಬೈಂದೂರು ಕ್ಷೇತ್ರದಲ್ಲಿ ರಾಜಕೀಯವಾಗಿ ದೊಡ್ಡ ಬೆಳವಣಿಗೆ ನಡೆದಿದೆ. ಕಳೆದ 13 ವರ್ಷಗಳಿಂದ ಬೈಂದೂರಿನ ಬಿಜೆಪಿ ಪಕ್ಷ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ನಾಯಕ ಇದೀಗ ಅಧಿಕೃತವಾಗಿ ಉಚ್ಚಾಟನೆಗೊಂಡಿದ್ದಾರೆ.

ಬಿಜೆಪಿ ಕಾರ್ಯಕರ್ತರ ವಲಯದಲ್ಲಿ ಭಾರಿ ಸಂಚಲನ ಉಂಟುಮಾಡಿದ್ದು, ಪಕ್ಷದೊಳಗಿನ ಆಂತರಿಕ ಸಮರವೇ ಈ ತೀರ್ಮಾನಕ್ಕೆ ಕಾರಣ ಎನ್ನಲಾಗುತ್ತಿದೆ. ಪಕ್ಷದ ಶಿಸ್ತು ಉಲ್ಲಂಘನೆ ಹಾಗೂ ವಿರುದ್ಧ ಚಟುವಟಿಕೆಗಳಲ್ಲಿ ತೊಡಗಿದ್ದ ಆರೋಪದ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಈ ಬೆಳವಣಿಗೆ ಬೈಂದೂರು ರಾಜಕೀಯದಲ್ಲಿ ಹೊಸ ಚರ್ಚೆಗೆ ದಾರಿ ಮಾಡಿಕೊಟ್ಟಿದ್ದು, ಮುಂದಿನ ದಿನಗಳಲ್ಲಿ ಇದರ ಪರಿಣಾಮಗಳು ಹೇಗಿರಲಿವೆ ಎಂಬುದು ಕುತೂಹಲ ಮೂಡಿಸಿದೆ.

Screenshot

Leave a Reply

Your email address will not be published. Required fields are marked *