
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕು ಕ್ರೀಡಾಂಗಣದಲ್ಲಿ ನಡೆದ ‘ಅಶೋಕ ಜನಮನ – 2025’ ಕಾರ್ಯಕ್ರಮದಲ್ಲಿ ಭಾರಿ ಜನಸಂದಣಿ ಕಂಡು ನೂಕುನುಗ್ಗಲು ಉಂಟಾದ ಘಟನೆ ವರದಿಯಾಗಿದೆ.
ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ್ದರು. ಪುತ್ತೂರು ಶಾಸಕ ಅಶೋಕ್ ರೈ ನೇತೃತ್ವದ ರೈ ಎಸ್ಟೇಟ್ ಮತ್ತು ಚಾರಿಟೇಬಲ್ ಟ್ರಸ್ಟ್ ವತಿಯಿಂದ ದೀಪಾವಳಿ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ ತಟ್ಟೆ ಹಾಗೂ ವಸ್ತ್ರ ವಿತರಣೆ ಮಾಡುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕ್ರೀಡಾಂಗಣದ ಸಾಮರ್ಥ್ಯಕ್ಕಿಂತ ಹೆಚ್ಚು ಜನ ಸೇರಿದ್ದರಿಂದ ನೂಕುನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಮಂದಿ ಅ*ಸ್ವಸ್ಥರಾಗಿದ್ದಾರೆ.ಅಸ್ವಸ್ಥರಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಹಲವರು ಇದ್ದಾರೆ.
ಆಮ್ಲಜನಕ ಕೊರತೆ ಹಾಗೂ ಕುಡಿಯಲು ನೀರಿನ ಅಭಾವದಿಂದ ಜನರಲ್ಲಿ ಪರದಾಟ ಉಂಟಾಗಿದೆ. ಕೆಸರು ತುಂಬಿದ್ದ ಮೈದಾನದಲ್ಲಿ ಜನರು ತೊಂದರೆ ಅನುಭವಿಸಿದ್ದು, ಸಣ್ಣ ಮಕ್ಕಳನ್ನು ಹಿಡಿದುಕೊಂಡು ಬಂದ ಜನರು ಕಷ್ಟಪಟ್ಟಿದ್ದಾರೆ.
ಅಸ್ವಸ್ಥರಾದವರಿಗೆ ತಕ್ಷಣ ಪುತ್ತೂರು ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
